ಜಿಲ್ಲೆ

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಮೈಸೂರು: ನಗರದ ರಿಂಗ್ ರೋಡ್‌ನ ಆರ್‌ಬಿಐ ಜಂಕ್ಷನ್ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಉತ್ತರಪ್ರದೇಶದ ಸುನೀಲ್ ಕುಮಾರ್ (32) ಮೃತರು. ನಗರದಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಇವರು ಭಾನುವಾರ ಸಂಜೆ ಬೈಕ್‌ನಲ್ಲಿ ಮೈಸೂರು-ಬೆಂಗಳೂರು ರಸ್ತೆ ಕಡೆಯಿಂದ ಕೆ.ಆರ್.ಎಸ್.ಕಡೆಗೆ ಬರುತ್ತಿದ್ದರು.

ಈ ಸಂದರ್ಭದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.