ಜುನೈದ್ 
ಜಿಲ್ಲೆ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತ

ಶನಿವಾರಸಂತೆ: ಟಿಂಬರ್ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸಮೀಪದ ಒಡೆಯನಪುರ ನಿವಾಸಿ ಜುನೈದ್ (25) ಅಪಘಾತದಲ್ಲಿ ಮೃತಪಟ್ಟ ಸವಾರ. ಟಿಂಬರ್ ಕೆಲಸ ಮಾಡುತ್ತಿದ್ದ ಜುನೈದ್ ಸೋಮವಾರ ಬೆಳಗ್ಗೆ ಎಂದಿನಂತೆ ಕೊಡ್ಲಿಪೇಟೆಗೆ ಬೈಕ್‌ನಲ್ಲಿ ಸ್ನೇಹಿತ ಹರ್ಷದ್ ಎಂಬಾತನನ್ನು ಕೂರಿಸಿಕೊಂಡು ತೆರಳುತ್ತಿದ್ದ. ಈ ವೇಳೆ ಅವರೆದಾಳು ಗ್ರಾಮದಲ್ಲಿ ಬೈಕ್ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಜುನೈದ್ ರಸ್ತೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ಹರ್ಷದ್‌ನನ್ನು ಹಾಸನದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.