ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಮಟ್ಟದ ಅಽಕಾರಿಗಳು ಹಾಗೂ ಎಲ್ಲ ತಹಸೀಲ್ದಾರರಿಗೆ ಫೆ. 21ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅಽನಿಯಮ- 2005ರ ಕುರಿತು ಕಾರ್ಯಾಗಾರ ಏರ್ಪಡಿಸಲಾಗಿದೆ. ಅಧಿಕಾರಿಗಳು, ಅವರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳು, ಮಾಹಿತಿ ಹಕ್ಕು ವಿಷಯ ನಿರ್ವಾಹಕರೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.