ಜಿಲ್ಲೆ

ಮಾಹಿತಿ ಹಕ್ಕು ನಮ್ಮ ಮೂಲ ಹಕ್ಕು

ಬೈಂದೂರು: ಮಾಹಿತಿ ಹಕ್ಕು ನಮ್ಮ ಮೂಲ ಹಕ್ಕಾಗಿದ್ದು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ನಮಗೆ ಹಕ್ಕಿದೆ. ಭ್ರಷ್ಟಾಚಾರ ನಿಯಂತ್ರಿಸಲು, ಸ್ವಚ್ಛ ಆಡಳಿತ ಜಾರಿಗೆ ತರುವಲ್ಲಿ ಮಾಹಿತಿ ಹಕ್ಕು ಕಾಯ್ದೆ ಸಹಕಾರಿ ಎಂದು ಕಂಬದಕೋಣೆ ಸಂವೇದನಾ ಪ್ರಥಮ ದರ್ಜೆ ಕಾಲೇಜು ಸಂಸ್ಥಾಪಕ ಡಾ.ಸುಬ್ರಹ್ಮಣ್ಯ ಭಟ್ ಹೇಳಿದರು.

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಕನ್ನಡ ವಿಭಾಗ ವತಿಯಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಹಕ್ಕು ಕಾಯ್ದೆ 2005ರ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಪ್ರಾಂಶುಪಾಲ ಪ್ರೊ.ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಂಬದಕೋಣೆ ಸಂವೇದನಾ ಪ್ರಥಮ ದರ್ಜೆೆ ಕಾಲೇಜು ಪ್ರಾಯೋಜಕತ್ವದಲ್ಲಿ ನಡೆದ ದುಂಡಾಕ್ಷರ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಾದ ರಕ್ಷಿತಾ, ಮೇಘಾ, ಅಕ್ಷತಾ ಎಲ್, ನಾಗಶ್ರೀ, ಅಶ್ವಿನಿ, ಸಿಂಚನಾ, ಜಾನಕಿ ಅವರಿಗೆ ಕಾಲೇಜು ಸಂಸ್ಥಾಪಕ ಡಾ.ಸುಬ್ರಹ್ಮಣ್ಯ ಭಟ್ ಬಹುಮಾನ ವಿತರಿಸಿದರು. ಪ್ರಾಧ್ಯಾಪಕ ಪ್ರೊ.ನವೀನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಶಿತಾ ಕಾರ್ಯಕ್ರಮ ನಿರೂಪಿಸಿದರು.