ಜಿಲ್ಲೆ

ಅನಮೋಡ್ ಘಾಟ್ ವಿಭಾಗದಲ್ಲಿ ಗುಡ್ಡ ಕುಸಿತ;ಸಂಚಾರ ಬಂದ್

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೋವಾದ ದಕ್ಷಿಣ ಗಡಿಯಲ್ಲಿರುವ ಅನಮೋಡ್ ಘಾಟ್ ವಿಭಾಗದಲ್ಲಿ ಗುಡ್ಡ ಕುಸಿದಿದ್ದು, ಬೃಹತ್ ಮಣ್ಣಿನ ರಾಶಿ ರಸ್ತೆಗೆ ಬಿದ್ದಿದೆ. ಪರಿಣಾಮ ಗೋವಾ-ಕರ್ನಾಟಕ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಬಂದ್ ಆಗಿದೆ.

ಅನಮೋಡ್ ಘಾಟ್ ಪ್ರದೇಶದ ಶ್ರೀ ದೂಧ್‌ಸಾಗರ್ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯಿಂದ ಅದನ್ನು ತೆರವುಗೊಳಿಸಿದರು. ಅನಮೋಡ್‌ ಘಾಟ್ ವಿಭಾಗದಿಂದ ಕರ್ನಾಟಕದ ಬೆಳಗಾವಿ ಮತ್ತು ಖಾನಾಪುರಕ್ಕೆ ಸಂಚಾರ ಸ್ಥಗೀತಗೊಳಿಸಲಾಗಿದೆ.