ಜಿಲ್ಲೆ

ಆನೆಗುಡ್ಡೆ ವಿನಾಯಕನ ದರ್ಶನ ಪಡೆದ ರಿಷಬ್

Dakshina Kannada

ಕೋಟ: ಕುಂಭಾಶಿಯ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಹಿತ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಳದ ಆಡಳಿತ ಮಂಡಳಿ ಸದಸ್ಯರು ಅವರನ್ನು ಗೌರವಿಸಿದರು.

ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು ದೇವಳದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.