ಜಿಲ್ಲೆ

ರಿಷಿಕಾ ಕುಂದೇಶ್ವರ ಸಾಧನೆಗೆ ಸಿಎಂ ಶ್ಲಾಘನೆ

Mangaluru - Hariprasad Rai


ಮಂಗಳೂರು : ಕರಾವಳಿಯ ಬಾಲ ಪ್ರತಿಭೆ, ಜೀ ಕನ್ನಡ ಡ್ರಾಮ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಅವರ ಸಾಧನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ. ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ರಿಶಿಕಾ ಮತ್ತು ಅವರ ತಂದೆ , ಪತ್ರಕರ್ತ ಜಿತೇಂದ್ರ ಕುಂದೇಶ್ವರ ಭೇಟಿಯಾಗಿದ್ದರು.
ಪ್ರೆಸ್ ಕ್ಲಬ್ ಗೌರವ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್. ಜಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ಉಪಸ್ಥಿತರಿದ್ದರು.