ಜಿಲ್ಲೆ

ರಾಜ್ಯ ಸರ್ಕಾರಿ ನೌಕರರ ಚುನಾವಣೆ, ಮತದಾರರ ಪಟ್ಟಿ ಪ್ರಕಟ

Haveri - Kariyappa Aralikatti

ರಾಣೆಬೆನ್ನೂರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದರ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜು.12ರ ಒಳಗಾಗಿ ಸಂಘದ ಶಾಖೆಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ತಾಲೂಕು ಕಾರ್ಯದರ್ಶಿ ಸುಧೀಂದ್ರ ಎಸ್. ಅವರನ್ನು ಸಂಪರ್ಕಿಸಬಹುದು ಎಂದು ತಾಲೂಕು ಘಟಕದ ಅಧ್ಯಕ್ಷ ಎಂ.ಡಿ.ದ್ಯಾಮಣ್ಣನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.