ವಿಟ್ಲ: ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಮಗುಚಿ ಬಿದ್ದಿದೆ.
ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ.