jeems 
ಜಿಲ್ಲೆ

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ ಸಾವು

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ತುಮಕೂರಿನ ಮಂದಾರಗಿರಿಗೆ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಕಾಲೇಜೊಂದರ ಇಂಜಿನಿಯರಿಂಗ್ ವಿದ್ಯಾರ್ಥಿ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ವಿದ್ಯಾರ್ಥಿನಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಪ್ಪಳ ಮೂಲದ ಜೇಮ್ಸ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಹಿಂಬದಿಯಲ್ಲಿದ್ದ ಚೈತ್ರಾ (23) ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ ಜೇಮ್ಸ್ ಸಹಪಾಠಿಯೊಂದಿಗೆ ಮೇ 26ರಂದು ಬೈಕ್‌ನಲ್ಲಿ ಪ್ರವಾಸಕ್ಕೆ ಹೋಗಿದ್ದ. ಪ್ರವಾಸ ಮುಗಿಸಿ ವಾಪಸ್ ಬರುವಾಗ ಬೈಕ್‌ನ ಹ್ಯಾಂಡಲ್ ಸಾರಿಗೆ ಬಸ್‌ಗೆ ತಗುಲಿ ಇಬ್ಬರೂ ಬೈಕ್‌ನೊಂದಿಗೆ ರಸ್ತೆಯಲ್ಲಿ ಬಿದ್ದಿದ್ದಾರೆ, ಈ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದಿದೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.