ಜಿಲ್ಲೆ

ಡೆಡ್ಲಿ ಸ್ಪಾಟ್​ನಲ್ಲಿ ಮತ್ತೊಂದು ಭೀಕರ ಅಪಘಾತ: ಎರಡು ಲಾರಿ, ಕಾರಿನ ನಡುವೆ ಡಿಕ್ಕಿ!

ಬೆಂಗಳೂರು: ಡೆಡ್ಲಿ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುರುವಾರ ನಸುಕಿನ ಜಾವ ಮತ್ತೊಂದು ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ.

ಎರಡು ಲಾರಿ ಹಾಗೂ ಕಾರಿನ ನಡುವಿನ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿಗಳ ಮುಂಭಾಗ ಜಖಂಗೊಂಡಿದ್ದು ಚಾಲಕರು ಗಾಯಗೊಂಡಿದ್ದಾರೆ.

ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಸಂಭವಿಸಿದ ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಅಪಘಾತದಿಂದ ಎರಡು ರಸ್ತೆಯಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು, ಸವಾರರು ಪರದಾಡುವಂತಾಗಿದೆ.

ಸುಮಾರು 5-6 ಕಿಲೋ‌ ಮೀಟರ್ ಟ್ರಾಫಿಕ್ ಜಾಮ್ ಆಗಿದ್ದು, ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರ ಹರಸಾಹಸ ನಡೆಸಿದ್ದಾರೆ.