ಜಿಲ್ಲೆ

ಅಡ್ಯಾರ್‌ ರಸ್ತೆ ಅಪಘಾತಕ್ಕೆ ವಿದ್ಯಾರ್ಥಿ ಬಲಿ

ಹರೀಶ ಎಂ.

ಮಂಗಳೂರು: ನಗರ ಹೊರವಲಯದ ಅಡ್ಯಾರ್‌ನಲ್ಲಿ ಶನಿವಾರ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಅಡ್ಯಾರ್ ಪದವು ನಿವಾಸಿ ಶರುದ್ದೀನ್ (16) ಮೃತಪಟ್ಟ ದುರ್ಧೈವಿ.


ಗೆಳೆಯನೊಂದಿಗೆ ಹಿಂಬದಿ ಸವಾರನಾಗಿ ಸ್ಕೂಟರ್‌ನಲ್ಲಿ ಸಹ್ಯಾದ್ರಿ ಕಾಲೇಜು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಟಿಪ್ಪರ್ ಸವಾರ ಎಡಕ್ಕೆ ಚಲಿಸಿದ ಕಾರಣ, ಟಯರ್‌ಗೆ ತಾಗಿ ಸ್ಕೂಟರ್ ನೆಲಕ್ಕೆ ಬಿದ್ದಿದೆ. ಈ ವೇಳೆ ಶರುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಗರ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.