ಜಿಲ್ಲೆ

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬೈಕ್; ಸವಾರ ಸಾವು

Haveri - Kariyappa Aralikatti

ರಾಣೆಬೆನ್ನೂರ: ಬೈಕ್‌ವೊಂದು ರಸ್ತೆ ಬದಿಯ ವಿಭಜಕಕ್ಕೆ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ತಾಲೂಕಿನ ಅಸುಂಡಿ ಕ್ರಾಸ್ ಬಳಿ ಎನ್‌ಎಚ್-48ರಲ್ಲಿ ಶುಕ್ರವಾರ ನಡೆದಿದೆ.
ಬಾಗಲಕೋಟೆ ಜಿಲ್ಲೆ ಮುದೋಳ ತಾಲೂಕಿನ ಬಸವಲಿಂಗ ನಗರದ ಮಂಜುನಾಥ ಕಾಶಿನಾಥ ತಂಗಡಿ (36) ಮೃತ ವ್ಯಕ್ತಿ.
ಈತ ದಾವಣಗೆರೆಯಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಅಸುಂಡಿ ಕ್ರಾಸ್ ಬಳಿ ಬೈಕ್ ರಸ್ತೆಯ ವಿಭಜಕಕ್ಕೆ ಡಿಕ್ಕಿಯಾಗಿದೆ. ಕೂಡಲೇ ಆತನನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಿ ಮೃತಪಟ್ಟಿದ್ದನು ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.