ಜಿಲ್ಲೆ

ಹೆದ್ದಾರಿಯ ಇಕ್ಕೆಲ ಒತ್ತುವರಿ ಗುರುತು

ಎ. ಆರ್. ರಘುರಾಮ

ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ನೇತೃತ್ವದಲ್ಲಿ ಅಳತೆ

ಪಾಂಡವಪುರ : ಪಾಂಡವಪುರ ಪಟ್ಟಣದ ಮಾರ್ಗವಾಗಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳು ಒತ್ತುವರಿಯಾಗಿರುವ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ನೇತೃತ್ವದಲ್ಲಿ ಅಳತೆ ಮಾಡಿ ಒತ್ತುವರಿ ಗುರುತು ಮಾಡಲಾಯಿತು.ತಾಲೂಕಿನ ಬನ್ನಘಟ್ಟದಿಂದ ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರುವರೆಗಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ವಿಸ್ತರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಿಂದ 33 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರಸ್ತೆ ವಿಸ್ತರಣೆ, ಚರಂಡಿ ಮತ್ತು ಡಾಂಬರೀಕರಣ ಕಾಮಗಾರಿ ಕೈಗೊಳ್ಳಬೇಕಿದೆ. ಆದರೆ ಪಟ್ಟಣದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗೆ ಸೇರಿದ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ಇದು ರಸ್ತೆ ವಿಸ್ತರಣೆಗೆ ತೊಡಕಾಗಿತ್ತು. ಹೀಗಾಗಿಭೂ ಮಾಪನ ಇಲಾಖೆ ಅಧಿಕಾರಿಗಳೊಂದಿಗೆ ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ನೇತೃತ್ವದ ತಂಡ ಸರ್ವೇ ಮಾಡಿ ಒತ್ತುವರಿಯಾಗಿರುವ ಜಾಗವನ್ನು

ಗುರುತು ಮಾಡಿದೆ. ಸರ್ವೇ ಕಾರ್ಯದಲ್ಲಿ ಭೂ ಮಾಪನ ಇಲಾಖೆಯ ಭಾಸ್ಕರ್, ಪುರಸಭೆ ಅಧಿಕಾರಿಗಳಾದ ನಾಗೇಶ್, ಇಂಜಿನಿಯರ್ ಯಶಸ್ವಿನಿ, ಲಕ್ಷ್ಮೀನಾರಾಯಣ ಇತರರು ಇದ್ದರು.