ಶಿಗ್ಗಾಂವಿ: ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ರಸ್ತೆ ಬದಿಯ ಫುಲಕಟ್ಟಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಹಿಂಬದಿ ಕುಳಿತ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಯತ್ತಿನಹಳ್ಳಿ ಬಳಿ ನಡೆದಿದೆ.
ಗ್ರಾಮದ ಧರಿಯಪ್ಪ ಬಸಪ್ಪ ಡವಗಿ (46) ಮೃತ ವ್ಯಕ್ತಿ. ಹಿಂಬದಿ ಕುಳಿತ್ತಿದ್ದ ರಾಜವೀರ ಡವಗಿ (9) ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇವರು ಈತ ಬೈಕ್ನಲ್ಲಿ ತೆರಳುತ್ತಿದ್ದ ಸಮಯದಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ತಪ್ಪಿಸಲು ಹೋದಾಗ ಬೈಕ್ ರಸ್ತೆ ಬದಿಯ ಫುಲಕಟ್ಟಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಧರಿಯಪ್ಪ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.