ರಾಯಚೂರು ರಾಷ್ಟಿçÃಯ ರಸ್ತೆ ಸುರಕ್ಷತಾ ಕಾರ್ಯಕ್ರಮದ ನಿಮಿತ್ತ ಸೋಮವಾರ ಪ್ರಾದೇಶಿಕ ಸಾರಿಗೆ ಇಲಾಖೆ ಹಮ್ಮಿಕೊಂಡ ರಸ್ತೆ ಸುರಕ್ಷತಾ ಕಾಲ್ನಡಿಗೆ ಜÁಥಾಕ್ಕೆ ಜಿಲ್ಲಾ ಪ್ರಧಾನ ಹಿರಿಯ ದಿವಾಣಿ ನ್ಯಾಯಾಽÃಶರಾದ ಸಿದ್ದರಾಮಪ್ಪ ಕಲ್ಯಾಣರಾವï ಹಾಗೂ ಜಿ¯್ಲÁಽಕಾರಿಗಳಾದ ನಿತೀಶï ಕೆ,ಅವರು ಚಾಲನೆ ನೀಡಿದರು.
ನಂತರ ನ್ಯಾ.ಸಿದ್ದರಾಮಪ್ಪ ಕಲ್ಯಾಣರಾವï ಅವರು ಮಾತನಾಡಿ, ಮಾನವ ಜೀವನವು ಅತ್ಯಂತ ಮೌಲ್ಯಯುತವಾದುದಾಗಿದೆ. ಅಪಘಾತಗಳಿಂದ ದೂರವಿರುವುದು ಮತ್ತು ಸುರಕ್ಷಿತ ಜೀವನ ನಡೆಸುವುದು ಸಹ ಜೀವನದಲ್ಲಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ವಾಹನ ಚಾಲನೆ ಮಾಡುವಾಗ ಜÁಗರೂಕತೆ ವಹಿಸಬೇಕು ಎಂದು ಸಲಹೆ ಮಾಡಿದರು.
ಅವಸರವೇ ಅಪಘಾತಕ್ಕೆ ಮೂಲ ಕಾರಣ ಎಂಬುದನ್ನು ಅರಿಯಬೇಕು. ಒತ್ತಡದಲ್ಲಿ, ಅವಸರದಲ್ಲಿ ವಾಹನಗಳನ್ನು ಚಾಲನೆ ಮಾಡಬಾರದು. ರಸ್ತೆ ನಿಯಮಗಳನ್ನ ತಪ್ಪದೇ ಪಾಲನೆ ಮಾಡಬೇಕು. ನಾವಷ್ಟೇ ಅಲ್ಲ, ಇತರರು ಸಹ ರಸ್ತೆಯ ಮೇಲೆ ಸುರಕ್ಷಿತವಾಗಿ ಸಂಚರಿಸುವಅತೆ ಸಹಕಾರ ನೀಡಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಎಸ್ಪಿ ಎಂ.ಪುಟ್ಟಮಾದಯ್ಯ, ಆರïಟಿ.ಒ ದೇವಿಂದ್ರ ಪ್ರಸಾದ, ಮಂಜುನಾಥ ಕೊರವಿ,ರಾಕೇಶï, ಪ್ರವೀಣ, ಮಂಜುನಾಥ, ಜಿನತï ಸಾಜಿದಾ ಸೇರಿ ಅನೇಕರು ಇದ್ದರು.