ಮದ್ದೂರು: ರಸ್ತೆಗಳು ಅಭಿವೃದ್ಧಿಯ ಸಂಕೇತವಾಗಿರುವುರಿಂದ ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಸೋಮವಾರ ನಿಡಘಟ್ಟ ಕದಲೂರು ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಶಾಸಕನಾದ ನಂತರ ಸರ್ಕಾರದಿಂದ ವಿಶೇಷ ಅನುದಾನ ತಂದು ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶಗಳಿಗೆ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದು, ಈ ಸಂಬಂಧ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಆರ್.ಮಹೇಶ್, ಗ್ರಾಪಂ ಅಧ್ಯಕ್ಷ ತಿಮ್ಮೆಗೌಡ, ಉಪಾಧ್ಯಕ್ಷೆ ರತ್ನಮ್ಮ, ಮಾಜಿ ಅಧ್ಯಕ್ಷೆ ಜಯಲಕ್ಷ್ಮಮ್ಮ, ಗುತ್ತಿಗೆದಾರ ತಮ್ಮಣ್ಣ, ಮುಖಂಡರಾದ ಕೆ.ಎಂ.ರವಿ, ಕುಳ್ಳಪ್ಪ, ರಾಮಣ್ಣ, ಕುಮಾರ್, ಶೇಷಯ್ಯ ಇತರರು ಇದ್ದರು.