ಕೋಳೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ನಳಿನ್ ಅತುಲ್ ಭೇಟಿ ನೀಡಿದರು. ಶಿಶು ಅಭಿವೃದ್ದಿ ಯೋಜನಾಧಿಕಾರಿ ಆರ್.ಜಯಶ್ರೀ, ಕಲಿಕಾ ಟಾಟಾ ಟ್ರಸ್ಟ್‌ನ ಜಿಲ್ಲಾ ವ್ಯವಸ್ಥಾಪಕ ಆಶೊಕ್, ಜಿಲ್ಲಾ ಸಂಯೋಜಕ ಸಿದ್ದಪ್ಪ ಕುರಿ, ವಲಯದ ಮೇಲ್ವಿಚಾರಕಿಯರಾದ ಪ್ರೀತಿ ಕೋರೆ, ಗಾಯತ್ರಿ, ಸುಮಂಗಲಾ ಸಜ್ಜನ ಇದ್ದರು. 
ಜಿಲ್ಲೆ

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯ

Gangavati - Desk - Veeresh S Ullagaddi

ಅಳವಂಡಿ: ಶಾಲಾ ಪೂರ್ವ ಶಿಕ್ಷಣದ ಹಂತದಲ್ಲಿ ಓದುವ 3 ರಿಂದ 6 ವರ್ಷದೊಳಗಿನ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.


ಸಮೀಪದ ಕೋಳುರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ ಕೊಪ್ಪಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಕರ ನಡೆ ಅಂಗನವಾಡಿ ಕಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದರು.


ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಪಡೆಯುವ ಮಕ್ಕಳ ಬೌದ್ದಿಕ ಮತ್ತು ದೈಹಿಕ ಬೆಳವಣಿಗೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲಾಗಿದೆ. ಪೋಷಕರ ಮಕ್ಕಳನ್ನು ಪ್ರತಿ ದಿನ ಅಂಗನವಾಡಿಗೆ ಕಳುಹಿಸಬೇಕು. ಅಂಗನವಾಡಿಯಲ್ಲಿ ಸಿಗುವ ಸಾಮಾನ್ಯ ಜ್ಞಾನದಿಂದ ಮಕ್ಕಳ ಬೌದ್ಧಿಕ ಸಾಮರ್ಥ್ಯ ವೃದ್ದಿಯಾಗಲಿದೆ ಎಂದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಒತ್ತಾಯಿಸಿದ ಶಿಕ್ಷಕಿಯ ವಿಡಿಯೋ ವೈರಲ್; ‘ಮಕ್ಕಳೇ ಭಾರತದ ಭವಿಷ್ಯ, ದ್ವೇಷಿಸಬೇಡಿ’ ಎಂದ ರಾಹುಲ್
ಶಾಲಾ ಪೂರ್ವ ಕಾರ್ಯಕ್ರಮದ ಅನುಷ್ಠಾನ, ಅಂಗನವಾಡಿ ಸೇವೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಉಪ ನಿರ್ದೆಶಕ ಗಂಗಪ್ಪ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಶಿಶು ಅಭಿವೃದ್ದಿ ಯೋಜನಾಧಿಕಾರಿ ಆರ್.ಜಯಶ್ರೀ, ಕಲಿಕಾ ಟಾಟಾ ಟ್ರಸ್ಟ್‌ನ ಜಿಲ್ಲಾ ವ್ಯವಸ್ಥಾಪಕ ಆಶೊಕ್, ಜಿಲ್ಲಾ ಸಂಯೋಜಕ ಸಿದ್ದಪ್ಪ ಕುರಿ, ವಲಯದ ಮೇಲ್ವಿಚಾರಕಿಯರಾದ ಪ್ರೀತಿ ಕೋರೆ, ಗಾಯತ್ರಿ, ಸುಮಂಗಲಾ ಸಜ್ಜನ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.