ಜಿಲ್ಲೆ

ರೋಲ್ ಕಾಲ್ ಗಿರಾಕಿ ಟೀಕೆ, ಶಾಸಕರ ಕ್ಷಮೆಯಾಚನೆಗೆ ಸಮತಾ ಸೈನಿಕ ದಳ ಆಗ್ರಹ

Rest of Bengaluru - Chikkaballapura - Venkatesh

ಚಿಕ್ಕಬಳ್ಳಾಪುರ: ದಲಿತ ಮುಖಂಡರನ್ನು ರೋಲ್ ಕಾಲ್ ಗಿರಾಕಿಗಳು ಎಂಬುದಾಗಿ ಟೀಕಿಸಿರುವ ಶಾಸಕ ಪ್ರದೀಪ್ ಈಶ್ವರ್ ಅಯ್ಯರ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಮತ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ಎಂ.ವೆಂಕಟಸ್ವಾಮಿ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕೈಗೊಂಡಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಶಾಸಕರು ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದರ ಅಸಮಾಧಾನವನ್ನು ಎಸ್‌ಎಸ್‌ಡಿ ಸಂಘಟನೆಯ ಮುಖಂಡ ವೆಂಕಟರೋಣಪ್ಪ ವ್ಯಕ್ತಪಡಿಸಿದ್ದಕ್ಕೆ ಕೀಳು ಮಾತು ಹೇಳಿರುವುದು ಖಂಡನೀಯ. ಕೂಡಲೇ ಕ್ಷಮೆ ಕೋರದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು.

*ಅಂಬೇಡ್ಕರ್ ರಥಯಾತ್ರೆ

ಕಾರ್ಯಕ್ರಮಕ್ಕೂ ಮೊದಲು ಚಿಕ್ಕಬಳ್ಳಾಪುರ ನಗರದ ಜೈಭೀಮ್ ವಸತಿ ನಿಲಯದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಯೊಂದಿಗೆ ರಥಯಾತ್ರೆಗೆ ಚಾಲನೆ ನೀಡಲಾಯಿತು. ಎಂ.ಜಿ.ರಸ್ತೆ, ಬಿ.ಬಿ.ರಸ್ತೆಯಲ್ಲಿ ಸಾಗಿ, ಒಕ್ಕಲಿಗರ ಕಲ್ಯಾಣ ಮಂಟಪದವರೆಗೂ ಮೆರವಣಿಗೆ ನಡೆಸಲಾಯಿತು.