ಬಳ್ಳಾರಿ ; ನಗರದ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಕುರಿತು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹಾಗೂ ಮೇ ರೈಟ್ಸ್ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ರೋಪ್ ವೇ ಯ ಪ್ರಾರಂಭಿಕ ಹಾಗೂ ಅಂತ್ಯದ ಸ್ಥಳವನ್ನು ಗುರುತಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿಗಳಿಂದ ಇದೇ ಸಂದರ್ಭದಲ್ಲಿ ಮಾಹಿತಿ ಪಡೆದುಕೊಂಡರು. ಬೆಟ್ಟದ ಸುತ್ತಲೂ ಸರ್ಕಾರಿ ನಿವೇಶನ ಅಥವಾ ಸ್ಥಳ ಲಭ್ಯವಿದ್ದಲ್ಲಿ ಗುರುತಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲನಾ ವರದಿಯನ್ನು ಪ್ರವಾಸೋದ್ಯಮ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಮೇ.ರೈಟ್ಸ್ ಸಂಸ್ಥೆಯ ಪ್ರತಿನಿಧಿಗಳಿಗೆ ಸೂಚಿಸಿದರು.
ಈ ಬಗ್ಗೆ ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಹಾನಿರ್ದೇಶಕರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಗೂಗಲ್ ಮೀಟ್ ಸಭೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ತಿಳಿಸಿದರು.