ಬಂಟ್ವಾಳ: ಇಲ್ಲಿನ ಕೊಯಿಲ ಅಣ್ಣಳಿಕೆ ಫ್ರೆಂಡ್ಸ್ ಬಳಗ ಆಶ್ರಯದಲ್ಲಿ ಲೊರೆಟ್ಟೋ ಹಿಲ್ ರೋಟರಿಕ್ಲಬ್ ಸಹಯೋಗದಲ್ಲಿ 14ನೇ ವರ್ಷದ ಪ್ರತಿಭಾನ್ವೇಷಣಾ ಕಾರ್ಯಕ್ರಮ ಅಣ್ಣಳಿಕೆಯಲ್ಲಿ ನಡೆಯಿತು.
ಬಂಟ್ವಾಳ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಗುರುತಿಸುವ ಸಾಮರ್ಥ್ಯ ಪಾಲಕರಲ್ಲಿರಬೇಕು. ಮಕ್ಕಳಲ್ಲಿ ಕಲಾಪ್ರಕಾರಗಳ ಮೇಲಿನ ಆಸಕ್ತಿ ಬೆಳೆಸಬೇಕು ಎಂದರು.
ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ ರಾಯಿ ಅವರನ್ನು ಸನ್ಮಾನಿಸಲಾಯಿತು. ಕೊಯಿಲ ಹಿ.ಪ್ರಾ.ಶಾಲೆಯ 5ರಿಂದ 7ನೇ ತರಗತಿ ಮತ್ತು ಪ್ರೌಢಶಾಲಾ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಹೊಕ್ಕಾಡಿಗೋಳಿ ಮಹಿಷಮರ್ದಿನಿ ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಅಧ್ಯಕ್ಷ ರತ್ನ ಕುಮಾರ ಚೌಟ, ವೇಣೂರು ಸ.ಪ್ರೌ.ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರ ನಾಯಕ್ ಕರ್ಪೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ಉದ್ಯಮಿ ಸತೀಶ್ ಪೂಜಾರಿ ಕೊಲ ಶುಭ ಹಾರೈಸಿದರು. ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಪದಾಧಿಕಾರಿಗಳು, ಫ್ರೆಂಡ್ಸ್ ಅಣ್ಣಳಿಕೆ ಸದಸ್ಯರು ಉಪಸ್ಥಿತರಿದ್ದರು.
ಸಂಘಟಕ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಸ್ವಾಗತಿಸಿದರು. ಕೆ.ರಮೇಶ್ ನಾಯಕ್ ರಾಯಿ ಅಭಿನಂದನಾ ಭಾಷಣ ಮಾಡಿದರು. ಚಂದ್ರಹಾಸ ಅಣ್ಣಳಿಕೆ ವಂದಿಸಿದರು. ಆಕಾಶ್ ಸಾಧಕ ವಿದ್ಯಾರ್ಥಿಗಳ ವಿವರ ನೀಡಿದರು. ಪುರುಷೋತ್ತಮ ಕೊಲ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪರಿಸರದ ಅಂಗನವಾಡಿ, ಹಿ.ಪ್ರಾ.ಮತ್ತು ಪ್ರೌಢಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.