ಜಿಲ್ಲೆ

ರೋಟರಿಯಿಂದ ವೆಂಡಿಂಗ್ ಮಷಿನ್ ಹಸ್ತಾಂತರ

ಸೌಮ್ಯ ಆರ್

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ರೋಟರಿ ಕ್ಲಬ್, ಬೆಂಗಳೂರು ರೋಟರಿ ಕ್ಲಬ್, ಮಹಾಲಕ್ಷ್ಮೀ ಸೆಂಟ್ರಲ್ ಸಹಯೋಗದಿಂದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮಷಿನ್ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನಡೆಯಿತು.

ಸೌಮ್ಯಾ ಶ್ರೀಕಾಂತ್ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸುಬ್ರಹ್ಮಣ್ಯ ರೋಟರಿ ಅಧ್ಯಕ್ಷ ಚಂದ್ರಶೇಖರ್ ನಾಯರ್, ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ, ಪದಾಧಿಕಾರಿ ಲಕ್ಷ್ಮೀದೇವಿ, ಸಂಸ್ಥೆ ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ, ಮುಖ್ಯಗುರು ಸತ್ಯಶಂಕರ ಭಟ್ ಎಂ., ವೇದವ್ಯಾಸ ವಿದ್ಯಾಲಯದ ಮುಖ್ಯಗುರು ಪ್ರಶಾಂತ್ ಬಿ. ಉಪಸ್ಥಿತರಿದ್ದರು. ಶಿಕ್ಷಕ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.