ಕಾಲಿಗೆ ಗುಂಡೇಟು ಬಿದ್ದ ರೌಡಿಶೀಟರ್ ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿರುವುದು. 
ಜಿಲ್ಲೆ

ಭದ್ರಾವತಿಯಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಭದ್ರಾವತಿಯ ಪ್ರಕರಣವೊಂದರಲ್ಲಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ರೌಡಿಶೀಟರ್‌ನ ಕಾಲಿಗೆ ಗುಂಡು ಹಾರಿಸಲಾಗಿದೆ.

ರವಿ ಅಲಿಯಾಸ್ ಗುಂಡನ ಕಾಲಿಗೆ ಗುಂಡು ಹಾರಿಸಲಾಗಿದೆ. ಪ್ರಕರಣವೊಂದರಲ್ಲಿ ರೌಡಿಶೀಟರ್ ಆಗಿರುವ ರವಿಯನ್ನು ಶುಕ್ರವಾರ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ಬಂಧಿಸಲು ತೆರಳಿದ್ದರು. ಶರಣಾಗುವಂತೆ ಸೂಚನೆ ನೀಡಿದ್ದರೂ ಮಾತು ಕೇಳದೆ ಪೊಲೀಸ್ ಸಿಬ್ಬಂದಿ ಆದರ್ಶ ಎಂಬುವರ ಮೇಲೆ ದಾಳಿಗೆ ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಪಿಎಸ್‌ಐ ಕೃಷ್ಣ ಅವರು ರೌಡಿಶೀಟರ್ ಗುಂಡನ ಕಾಲಿಗೆ ಗುಂಡು ಹಾರಿಸಿದ್ದಾರೆ.

ರವಿ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಪಿಎಸ್‌ಐ ಗುಂಡು ಹಾರಿಸಿದ್ದಾರೆ ಎಂದು ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ತಿಳಿಸಿದ್ದಾರೆ.