ಶಿವರಾಜ ಎಂ.ಬೆಂಗಳೂರು ಗ್ರಾಮಾಂತರ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವುದು ಸೇರಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 31 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. 2 ನೇ ಹಂತದ ಮತದಾನ ಮುಗಿದು ಚುನಾವಣಾ ನೀತಿ ಸಂಹಿತೆ ಕೊನೆಯಾಗುವವರೆಗೆ ಈ ಆದೇಶ ಜಾರಿಯಲ್ಲಿರಲಿದೆ.
ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ವ್ಯಾಪ್ತಿಯಲ್ಲಿ 62 ರೌಡಿಶೀಟರ್‌ಗಳ ಗಡಿಪಾರಿಗೆ ಜಿಲ್ಲಾ ಪೊಲೀಸರು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ರೌಡಿಶೀಟರ್‌ಗಳ ಪಟ್ಟಿ ಪರಿಶೀಲನೆ ಬಳಿಕ 31 ಮಂದಿಗೆ ಗಡಿಪಾರಿಗೆ ಡಿಸಿ ಸಮ್ಮತಿಸಿದ್ದರು. ಈ ಹಿನ್ನೆಲೆಯಲ್ಲಿ ಅಷ್ಟೂ ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರ ವ್ಯಾಪ್ತಿಯ ಚುನಾವಣೆ ಮುಗಿದಿದ್ದರು ಎರಡನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾಕ್ರಮವಾಗಿ ರಾಜ್ಯದಲ್ಲಿ ನೀತಿ ಸಂಹಿತೆ ಕೊನೆಯಾಗುವವರೆಗೆ ಆದೇಶ ಜಾರಿಯಲ್ಲಿರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಠಾಣೆಯಲ್ಲಿ ಪ್ರತಿದಿನ ಸಹಿ: ಗಡಿಪಾರು ಶಿಕ್ಷೆಗೆ ಗುರಿಯಾದ ರೌಡಿಶೀಟರ್‌ಗಳನ್ನು ಖುದ್ದು ಆಯಾ ಠಾಣಾ ವ್ಯಾಪ್ತಿಯ ಪೊಲೀಸರೇ ಕರೆದೊಯ್ದು ನಿಗಧಿಪಡಿಸಿದ ಜಿಲ್ಲೆಗೆ ಬಿಟ್ಟು ಬಂದಿದ್ದಾರೆ. ಹೀಗೆ ಗಡಿಪಾರು ಶಿಕ್ಷೆಗೊಳಗಾದ ರೌಡಿಶೀಟರ್‌ಗಳು ತಾವು ವಾಸವಿರುವ ವ್ಯಾಪ್ತಿಯ ಠಾಣೆಗಳಿಗೆ ಪ್ರತಿದಿನ ಎರಡು ಬಾರಿ ಹೋಗಿ ಠಾಣಾ ಹಾಜರಿ ಪುಸ್ತಕದಲ್ಲಿ ಸಹಿ ಮಾಡಬೇಕಿದೆ. ಒಂದು ವೇಳೆ ಸಹಿ ಮಾಡುವುದು ತಪ್ಪಿದರೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ ಲೋಕಸಭಾ ಚುನಾವಣೆ ಲಿತಾಂಶದವರೆಗೆ ಈ ನಿಯಮ ಚಾಲ್ತಿಯಲ್ಲಿದ್ದು, ಬಳಿಕ ಆಯಾ ಠಾಣಾ ಹಿರಿಯ ಪೊಲೀಸರ ಅನುಮತಿ ಪಡೆದು ಸ್ವ ಸ್ಥಳಕ್ಕೆ ವಾಪಸ್ ಆಗಬೇಕಿದೆ. ವಾಪಸ್ ಆದ ಬಳಿಕ ಆಯಾ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಬಳಿ ವರದಿ ಮಾಡಿಕೊಳ್ಳಬೇಕಿದೆ. ಇಷ್ಟೂ ಅವಧಿಯಲ್ಲಿ ನಿಯಮ ಉಲ್ಲಂಸಿದರೆ ಜೈಲು ಶಿಕ್ಷೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರದ ಜಿಲ್ಲೆಗಳಿಗೆ ರವಾನೆ: ಗಡಿಪಾರು ಶಿಕ್ಷೆಗೆ ಗುರಿಯಾಗಿರುವ ಗ್ರಾಮಾಂತರ ರೌಡಿಶೀಟರ್‌ಗಳನ್ನು ರಾಜ್ಯದ ಗಡಿ ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಅಂಥ ಜಿಲ್ಲೆಗಳಿಂದಲೂ ಪರೋಕ್ಷವಾಗಿ ಚುನಾವಣಾ ಚಟುವಟಿಕೆಯಲ್ಲಿ ಕಾಣಿಸಿಕೊಳ್ಳುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
3476 ಶಸಾಸಗಳು ಜಮೆ: ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಶಸ್ತ್ರ ಪರವಾನಗಿ ಹೊಂದಿರುವ ಶಸ್ತ್ರ ಪರವಾನಗಿದಾರರು ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಜಮೆ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಶಸಾಸಗಳ ಜಮೆ ಪ್ರಕ್ರಿಯೆ ಆರಂಭಿಸಿದ್ದ ಪೊಲೀಸರು 3476 ಶಸಾಸ್ತಗಳನ್ನು ಜಮೆ ಮಾಡಿಕೊಂಡಿದ್ದಾರೆ. ಇದರಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸೇರಿ ಕೆಲವೊಂದು ವಿಶೇಷ ಪ್ರಕರಣಗಳಲ್ಲಿ ಶಸಾಸ ಹೊಂದಿರುವ ಪರವಾನಗಿದಾರರು ಇದರಲ್ಲಿ ವಿನಾಯಿತಿ ಕೋರಿದ್ದರು ಇವರ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿ ಈ ಬಗ್ಗೆ ಪರಿಶೀಲನೆ ನಡೆಸಿ 35 ಮಂದಿಗೆ ಭದ್ರತೆ ಹಾಗೂ ಇನ್ನಿತರ ಕಾರಣಗಳಿಂದ ವಿನಾಯಿತಿ ನೀಡಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 31 ರೌಡಿಶೀಟರ್‌ಗಳ ಗಡಿಪಾರು ಮಾಡಲಾಗಿದೆ. ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಮುಗಿದು ನೀತಿ ಸಂಹಿತೆ ಕೊನೆಯಾಗುವವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಗಡಿಪಾರು ಶಿಕ್ಷೆಗೆ ಗುರಿಯಾದ ರೌಡಿಶೀಟರ್‌ಗಳು ಸಂಬಂಧಪಟ್ಟ ಠಾಣೆಯಲ್ಲಿ ಪ್ರತಿದಿನ ಸಹಿ ಮಾಡಬೇಕು ಇಂಥವರ ಚಲನವಲಯಗಳ ಮೇಲೆ ಪೊಲೀಸರು ನಿಗಾವಹಿಸಲಿದ್ದಾರೆ.ಅದೇ ರೀತಿ ಜಿಲ್ಲಾ ವ್ಯಾಪ್ತಿಯಲ್ಲಿ 3476 ಶಸಾಸ್ತಗಳನ್ನು ಜಮೆ ಮಾಡಿಕೊಳ್ಳಲಾಗಿದೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್‌ಪಿ ಬೆಂ.ಗ್ರಾಮಾಂತರ
ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್‌ಗಳ ಗಡಿಪಾರಿಗೆ ಆದೇಶಿಸಲಾಗಿತ್ತು. ಅದೇ ರೀತಿ ಶಸಾಸಗಳ ಜಮೆಗೆ ಸೂಚನೆ ನೀಡಲಾಗಿತ್ತು. ಜಿಲ್ಲಾ ಪೊಲೀಸರು ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆ ಯಶಸ್ವಿಯಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಕ್ರಮಕೈಗೊಂಡಿದ್ದರಿಂದ ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆದಿದೆ.
ಡಾ.ಎನ್.ಶಿವಶಂಕರ್, ಜಿಲ್ಲಾಧಿಕಾರಿ