ಹುಬ್ಬಳ್ಳಿ :ಹುಬ್ಬಳ್ಳಿ ರೈಲ್ವೆ ವಿಭಾಗದ ಕಚೇರಿಯಲ್ಲಿ ಆಯೋಜಿಸಿದ್ದ ಆರ್ಪಿಎಫ್ನ (ರೈಲ್ವೆ ರಕ್ಷಣಾ ದಳ) ನವೀಕರಿಸಲಾದ ನಿರ್ವಹಣೆ ಮತ್ತು ನಿಯಂತ್ರಣ ಕೇಂದ್ರ (ಡಿಜಿಟಲ ಸಿಸಿ ಕ್ಯಾಮೆರಾ ಕಣ್ಗಾವಲು ಪ್ಯಾನಲ್) ಉದ್ಘಾಟನೆ ಸಮಾರಂಭ ಹಾಗೂ ಪ್ರಗತಿ ಪರಿಶೀಲನಾ ಸಭೆ ನಗರದಲ್ಲಿ ಶನಿವಾರ ನಡೆಯಿತು.
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ ಸರನ ಮಾಥುರ ಮಾತನಾಡಿ, ಇಲಾಖೆಯು ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಅಳವಡಿಸಿ, ಶೀಘ್ರ ಹಾಗೂ ಸುರಕ್ಷಿತ ಕಾರ್ಯ ನಿರ್ವಹಣೆ ಸಾಧಿಸುತ್ತಿದೆ ಎಂದರು.
ರೈಲ್ವೆಗೆ ಹೆಚ್ಚಿನ ಆದಾಯ ಆಕರ್ಷಿಸಿ, ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯಗಳನ್ನು ಒದಗಿಸುವ ಜತೆಗೆ ಬಾಕಿ ಉಳಿದಿರುವ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸಲಹೆ ನೀಡಿದರು.
ಡಿಆರ್ಎಂ ಬೇಲಾ ಮೀನಾ ಹಾಗೂ ಹೆಚ್ಚುವರಿ ಡಿಆರ್ಎಂಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ವಿಭಾಗವು ಸಾಧಿಸಿರುವ ಸುಧಾರಣೆಗೆ ಪ್ರಧಾನ ವ್ಯವಸ್ಥಾಪಕರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ ಅವರು ಮಾತನಾಡಿ, ಇಲಾಖೆಯ ದಕ್ಷ ಕಾರ್ಯ ನಿರ್ವಹಣೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ ಎಂದರು.
ವಿಭಾಗಗಳ ಹಿರಿಯ ಅಧಿಕಾರಿಗಳು ತಮ್ಮಇಲಾಖೆಗಳ ಪ್ರಗತಿ ಮಂಡಿಸಿದರು. ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಟಿ.ಬಿ. ಭೂಷಣ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.