ಮೈಸೂರು: ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಹಣ ಸಂಪಾದಿಸಬಹುದು ಎಂಬ ವಂಚಕರ ಮಾತು ನಂಬಿ ಮಹಿಳೆಯೊಬ್ಬರು 14 ಲಕ್ಷ ರೂ. ಕಳೆದುಕೊಂಡಿದ್ದಾರೆ.
ನಗರದ ಕೃಷ್ಣಮೂರ್ತಿಪುರಂನಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕೆಲಸದ ಜಾಹೀರಾತು ಗಮನಿಸಿ ದೂರವಾಣಿ ಮೂಲಕ ಸಂಪರ್ಕಿಸಿದರು. ನಂತರ ವಂಚಕರು ಮಹಿಳೆಗೆ ಆನ್‌ಲೈನ್‌ನಲ್ಲಿ ಮಾಡಬಹುದಾದ ಕೆಲಸ ನೀಡಿದರು. ಆ ನಂತರ ವಂಚಕರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ 14 ಲಕ್ಷ ರೂ. ವಂಚಿಸಿದ್ದಾರೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ