ಗೌರಿಬಿದನೂರು: ವಿದುರಾಶತ್ಥ ಗ್ರಾಮದ ಮೂಲಕ ಹರಿಯುವ ಉತ್ತರ ಪಿನಾಕಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಚೆಕ್ ಡ್ಯಾಂ ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ 2.75 ಕೋಟಿ ರೂ.ಅನುದಾನ ಬಿಡುಗಡೆಗೊಳಿಸಿದೆ. ಈ ಮೊದಲು ನಿರ್ಮಿಸಿದ್ದ ಚೆಕ್ ಡ್ಯಾಂ ಶಿಥಿಲಾವಸ್ಥೆಗೆ ತಲುಪಿದ್ದರಿಂದ ಪುನರ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕೃಷಿ ಮಾಜಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಸಣ್ಣ ನೀರಾವರಿ ಸಚಿವ ಬೋಸ್ ರಾಜಗೆ ಪತ್ರ ಬರೆದಿದ್ದರು. ಮಾಜಿ ಸಚಿವರ ಮನವಿ ಪರಿಗಣಿಸಿ 2.75 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ, ಕಾಮಗಾರಿಗೆ ಆದೇಶ ಹೊರಡಿಸಿದ್ದಾರೆ. ಚೆಕ್ ಡ್ಯಾಂ ನಿರ್ಮಾಣದಿಂದ ಅಂತರ್ಜಲಮಟ್ಟ ವೃದ್ಧಿಯಾಗಲಿದೆ.ರೈತರ ಓಡಾಟ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಲಭ್ಯವಾಗಲಿದೆ. ಬಹುಪಯೋಗಿ
ಕಾಮಗಾರಿಗೆ ಅನುಮೋದನೆ ನೀಡಿ ಅನುದಾನ ಒದಗಿಸಿದ ಸಚಿವ ಬೋಸ್ ರಾಜ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಮಾಜಿ
ಸಚಿವ ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.