ಜಿಲ್ಲೆ

ಪ್ರಬಂಧದಿಂದ ವಿಚಾರಧಾರೆ ವಿನಮಯ

ತುಮಕೂರು ಡೆಸ್ಕ್

ತಿಪಟೂರು: ವಿದ್ಯಾರ್ಥಿ ದೆಸೆಯಲ್ಲೇ ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಪ್ರಾವಿಣ್ಯತೆ ಮತ್ತು ಕುಶಲತೆ ಸಾಧಿಸಲು ಸಾದ್ಯ ಎಂದು ಪ್ರಾಂಶುಪಾಲ ಎಂ.ಡಿ.ಶಿವಕುಮಾರ್​ ಹೇಳಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕುಮಟ್ಟದ ಪಿಯು ಕಾಲೇಜುಗಳ ಬಾಪೂಜಿ ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಗಾಂಧೀಜಿ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ತಾಲೂಕಿನ ವಿವಿಧ ಪದವಿ ಪೂರ್ವ ಕಾಲೇಜುಗಳ 23 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಬಾಗವಹಿಸಿದ್ದರು. ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಶ್ರುತಿ ಪ್ರಥಮ ಸ್ಥಾನ, ಬಸವೇಶ್ವರ ಕಾಲೇಜಿನ ಶಶಿಧರ್​ ಎಲ್​.ಎಂ. ದ್ವೀತಿಯ ಸ್ಥಾನ ಹಾಗೂ ಬಾಲಕಿಯರ ಸ.ಪ.ಪೂ ಕಾಲೇಜಿನ ಕೀರ್ತಿ ತೃತೀಯ ಸ್ಥಾನ ಪಡೆದಿದ್ದು, ಸದರಿ ವಿದ್ಯಾರ್ಥಿಗಳ ಪ್ರಬಂಧಗಳನ್ನು ಜಿಲ್ಲಾ ಮಟ್ಟಕ್ಕೆ ಕಳಿಸಲಾಗುವುದು ಎಂದು ತಿಳಿಸಿದರು.