ಜಿಲ್ಲೆ

ಶಾಲೆಗೆ ಮಕ್ಕಳ ದಾಖಲಾತಿ ಕಡ್ಡಾಯ : ಸಚಿವ ಸುರೇಶ್​ ಕುಮಾರ್​

djtrupti

ಬೆಂಗಳೂರು: ಕಡ್ಡಾಯ ಶಿಕ್ಷಣ ಕಾಯ್ದೆ(ಆರ್​ಟಿಇ) ನಿಯಮ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಕ್ಕಳನ್ನು ಮುಂದಿನ ತರಗತಿಗಳಿಗೆ ಪಾಲಕರು ದಾಖಲು ಮಾಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​.ಸುರೇಶ್​ ಕುಮಾರ್​ ಹೇಳಿದರು.

ಸೋಮವಾರ ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು. ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕ ವರ್ಷ ಆರಂಭವಾಗಿಲ್ಲ ಎಂಬ ನೆಪದಲ್ಲಿ ಶಾಲೆಗಳನ್ನು ಮುಂದಿನ ತರಗತಿಗಳಿಗೆ ದಾಖಲು ಮಾಡದೇ ಉಳಿಯುವುದು ತಪು$್ಪ. ಇದು ಆರ್​ಟಿಇ ನಿಯಮ ವಿರುದ್ಧವಾಗುತ್ತದೆ. ಪಾಲಕರು ತಮ್ಮ ಮಕ್ಕಳನ್ನು ಹಾಲಿ ಓದುತ್ತಿದ್ದ ಶಾಲೆಗೆ ಅಥವಾ ತಮಗೆ ಅನುಕೂಲವಾದ ಶಾಲೆಗಳಲ್ಲಿ ಮರು ದಾಖಲಾತಿಗೊಳಿಸಲು ಕ್ರಮ ವಹಿಸಬೇಕು ಎಂದರು.

ದಾಖಲು ಮಾಡದೇ ಉಳಿಯುವುದರಿಂದ ಮಕ್ಕಳ ಹಕ್ಕು ಕಸಿದಂತಾಗುತ್ತದೆ. ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ ಎರಡು ಬಾರಿ ಸಮಯ ವಿಸ್ತರಿಸಲಾಗಿತ್ತು. ಆದರೂ ಕೆಲ ಪಾಲಕರು ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡಿಲ್ಲ. ಇದಕ್ಕೆ ಕರೊನಾ ಒಂದು ಕಾರಣವಾಗಬಾರದು ಎಂದರು.

ಶಾಲೆಗಳಿಗೆ ಸೂಚನೆ: ಕರೊನಾ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ಶಾಲಾ ಶುಲ್ಕ ಹೆಚ್ಚಳ ಮಾಡದಿರುವ ಮತ್ತು ಸಾಧ್ಯವಾದಷ್ಟು ಶುಲ್ಕ ಇಳಿಸುವ, ಶುಲ್ಕ ಪಾವತಿಸಲು ಕಂತುಗಳನ್ನು ನೀಡುವುದು ಸೇರಿ ಮಾನವೀಯ ನಿಲುವುಗಳನ್ನು ಕೈಗೊಳ್ಳಬೇಕು. ಶಾಲಾ ಶುಲ್ಕ ನಿಗದಿ ವಿಚಾರದಲ್ಲಿ ಮಕ್ಕಳ ಪಾಲಕರೊಂದಿಗೆ ಚರ್ಚಿಸಿ ಶಾಲಾ ಸಂಟನೆಗಳು ಅವರ ವಿಶ್ವಾಸವನ್ನೂ ಪಡೆದುಕೊಂಡು ಶ್ರೀ ಒಂದು ನಿರ್ಧಾರಕ್ಕೆ ಬಂದು ಸರ್ಕಾರಕ್ಕೆ ತಿಳಿಸಿದಲ್ಲಿ ಈ ಸಂಬಂಧ ಶಾಲಾ ಶುಲ್ಕ ನಿಗದಿ ಕುರಿತಂತೆ ಸರ್ಕಾರವು ಸೂಕ್ತ ತೀರ್ಮಾನಕ್ಕೆ ಬರಲು ಅನುಕೂಲವಾಗಲಿದೆ ಎಂದರು.