ಶೃಂಗೇರಿ: ತಾಲೂಕಿನ ಗೋಚವಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಶಿಕ್ಷಕಿ ಮೇಲೆ ಪ್ರಾಚಾರ್ಯರು ಮಾನಸಿಕವಾಗಿ ಹಿಂಸೆ ನೀಡುವ ಜತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಂತೇಶ್ ಭಜಂತ್ರಿ ಶಾಲೆಗೆ ಆಗಮಿಸಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಪ್ರತ್ಯೇಕವಾಗಿ ಕರೆಸಿ ಮಾಹಿತಿ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಶಾಲೆಯಲ್ಲಿ ಮಕ್ಕಳ ಮೂಲ ಸೌಕರ್ಯಗಳ ಕುರಿತು ಪರೀಕ್ಷೆ ನಡೆಸಲಾಗಿದೆ. ಅಡಗೆ ಸಿಬ್ಬಂದಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಂದ ತೊಂದರೆ ಇರುವುದು ತಿಳಿದು ಬಂದಿದೆ. ತನಿಖೆ ನಡೆಸಿದ ಎಲ್ಲ ವರದಿಗಳನ್ನು ಇನ್ನೊಮ್ಮೆ ಪರಿಶೀಲಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಂತೋಷ್, ಜಿಲ್ಲಾ ದೂರು ಸಮಿತಿ ಅಧ್ಯಕ್ಷೆ ಯಮುನಾ ಮತ್ತು ದರ್ಶಿನಿ ಇದ್ದರು.