ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ನಾವು ಕೈಗೊಳ್ಳುವ ವೃತ್ತಿಯಲ್ಲಿ ಶಿಸ್ತು ಮುಖ್ಯ. ಮಾಡುವ ಕೆಲಸದಲ್ಲಿ ಕಾರ್ಯಕ್ಷಮತೆ ಅಳವಡಿಸಿಕೊಂಡು ಆತ್ಮವಿಶ್ವಾಸದೊಂದಿಗೆ ಮುಂದುವರಿಯಬೇಕು ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ವಿಭಾಗದ ಡೀನ್ ಡಾ.ಸೌಮ್ಯಾ ಬಿ.ಪಿ. ಹೇಳಿದರು.
ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿಟಿಪಿ ಮತ್ತು 30 ದಿನಗಳ ಮಹಿಳಾ ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಉಪನ್ಯಾಸಕಿ ವೀಣಾ ಉಪಸ್ಥಿತರಿದ್ದರು. ರುಡ್‌ಸೆಟ್ ಸಂಸ್ಥೆ ನಿರ್ದೇಶಕ ಅಜೇಯ ಸ್ವಾಗತಿಸಿದರು. ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಶಿಬಿರಾರ್ಥಿಗಳಾದ ಬಸವರಾಜ್, ಸೃಜನ್ಯಾ, ದಿವ್ಯಾ, ವಿಧಾತ್ರಿ ಅನುಭವ ಹಂಚಿಕೊಂಡರು.