ಬೆಳ್ತಂಗಡಿ: ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಗ್ರಾಹಕರನ್ನು ಗೌರವದಿಂದ ಮತ್ತು ಪ್ರೀತಿಯಿಂದ ನೋಡಿಕೊಂಡಾಗ ಅದೇ ದೊಡ್ಡ ಪ್ರಚಾರಕ್ಕೆ ಕಾರಣವಾಗುತ್ತದೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ಸೆಟ್ ಸಂಸ್ಥೆಯ ತರಬೇತಿಯಿಂದ ಯಶಸ್ಸು ಗಳಿಸಿ ಎಂದು ಉದ್ಯಮಿ ಶಶಿಧರ್ ಪೈ ಹೇಳಿದರು.
ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನ ನಡೆದ ದ್ವಿಚಕ್ರ ವಾಹನ ದುರಸ್ತಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ಮತ್ತು ಬ್ಯಾಂಕ್‌ನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದು ಉದ್ಯಮ ಆರಂಭಿಸಿ. ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದರು.
ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ವಂದಿಸಿದರು. 33 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು. ಚೇತನಾ, ಹಾಲಪ್ಪ, ಶಿವಾನಂದ ತರಬೇತಿಯ ಅನುಭವ ಹಂಚಿಕೊಂಡರು.