ಸಿದ್ದಾಪುರ: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕ್ಕರೆ ಹಾಗೂ ಕೂಡ್ಲೂರು ಚೆಟ್ಟಳ್ಳಿ ಗ್ರಾಮಗಳಿಗೆ ಮೋಟಾರ್ ಮತ್ತು ಪೈಪ್‌ಲೈನ್ ವಿಸ್ತರಣಾ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ಕಂಡಕ್ಕರೆ ಹಾಗೂ ಕೂಡ್ಲೂರು ಚೆಟ್ಟಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದಕ್ಕೆ ಮುಕ್ತಿ ನೀಡುವ ಸಲುವಾಗಿ ಎರಡೂ ವಿಭಾಗಕ್ಕೆ ತಲಾ 5.5ಲಕ್ಷ ರೂ.ಮೀಸಲಿಡಲಾಗಿದ್ದು, ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ಉಳಿದ ಭಾಗಗಳಲ್ಲೂ ರಸ್ತೆ ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಹಂತ ಹಂತವಾಗಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.