ಕಾರವಾರ: ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕರ್ತವ್ಯವವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು ಗುರುವಾರ ತಹಶೀಲ್ದಾರರ ಮೂಲಕ ಕಂದಾಯ ಸಚಿವರಿಗೆ ಮನವಿ ರವಾನಿಸಿದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಈ ಮುಷ್ಕರ ಆರಂಭವಾಗಿದ್ದು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವಂತೆ ಒತ್ತಾಯಿಸಿರುವ ಧರಣಿ ನಿರತರು ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ಧಿಪಡಿಸಿರುವ ವೆಬ್, ಮೊಬೈಲ್ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡುವಂತೆ ಕೋರಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮೆರಾ ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ (12ಜಿಬಿ/256ಜಿಬಿ), ಸಿಯುಜಿ ಸಿಮ್ ಮತ್ತು ಡೇಟಾಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್ ಪ್ರಿಂಟರ್ ಮತ್ತು ಸ್ಕ್ಯಾನರ್‌ನೀಡುವಂತೆ ಮನವಿಯಲ್ಲಿ ಕೋರಿದ್ದಾರೆ.
ಸೇವಾ ವಿಷಯಗಳಿಗೆ ಸಂಬAಧಿಸಿದAತೆ ಸೌಲಭ್ಯಗಳನ್ನು ಕಲ್ಪಿಸುವಂತೆ, ಮೊಬೈಲ್ ತಂತ್ರಾAಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವ ಬಗ್ಗೆ, ಕೆ.ಸಿ.ಎಸ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡುವ ಬಗ್ಗೆ,
ಕರ್ನಾಟಕ ಉಚ್ಛನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರ.ದ.ಸ/ರಾ.ನಿ ಹುದ್ದೆಗಳಿಗೆ ತಕ್ಷಣವೇ ಪದೊನ್ನತಿ ನೀಡಲು ಕ್ರಮವಹಿಸುವಂತೆ ಒತ್ತಾಯಿಸಿದ್ದಾರೆ.
ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡುವ ಬಗ್ಗೆ,
ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್ ನಿಯಮ 16ಎ ರ ಉಪಖಂಡ(2)ನ್ನು ಮರುಸ್ಥಾಪಿಸುವ , ಕೆಲವು ವಿಶೇಷ ಚೇತನ, ತೀವ್ರ ಅನಿವಾರ್ಯ ಹಾಗೂ ಆರೋಗ್ಯದ ಸಮಸ್ಯೆ ಇರುವ ಪ್ರಕರಣಗಳ ನಿಯೋಜನೆಗಳನ್ನು ಕೌನ್ಸಿಲಿಂಗ್ ಮೂಲಕ ನಿಯೋಜನೆ ಆದೇಶಗಳನ್ನು ಮಾಡುವ ಬಗ್ಗೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಡಲಾಗಿದೆ.
ಈ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗಿದೆ ಎಂದು ಮುಷ್ಕರ ನಿರತ ನೌಕರರು ತಿಳಿಸಿದ್ದಾರೆ.