ಜಿಲ್ಲೆ

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅಗತ್ಯ

ಜಿ.ಹೆಚ್. ಧನ್ಯಕುಮಾರ್

ಬಾಳೆಹೊನ್ನೂರು: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯಗಳು ದೊರೆಯಬೇಕಿದೆ ಎಂದು ಆಡುವಳ್ಳಿ ಗ್ರಾಪಂ ಅಧ್ಯಕ್ಷ ಎಂ.ವಿ.ಶ್ರೀನಿವಾಸಗೌಡ ಹೇಳಿದರು.

ಆಡುವಳ್ಳಿ ಗ್ರಾಮ ಪಂಚಾಯಿತಿನಿಂದ ಗ್ರಾಪಂ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿ, ಗ್ರಾಮೀಣ ಭಾಗದಿಂದ ಬರುವ ಮಕ್ಕಳಿಗೆ ಶಿಕ್ಷಣ ಪಡೆಯಲು ಯಾವುದೇ ಕೊರತೆಯಾಗಬಾರದು. ಇತರೆ ವಿದ್ಯಾರ್ಥಿಗಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಗ್ರಾಪಂನಿಂದ ಗ್ರಾಪಂ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಬ್ಯಾಗ್‌ಗಳನ್ನು ನೀಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲ ವಿದ್ಯಾರ್ಥಿಗಳು ಉತ್ತಮವಾಗಿ ವ್ಯಾಸಂಗ ಮಾಡಿ ಸಾಧನೆ ಮಾಡಬೇಕು ಎಂಬುದು ನಮ್ಮ ಆಶಯ ಎಂದರು.

ಗ್ರಾಪಂ ವ್ಯಾಪ್ತಿಯ ಆಡುವಳ್ಳಿ, ಗಡಿಗೇಶ್ವರ, ತೋರುವಾನಿ, ಮೇಗರಮಕ್ಕಿ, ಕೊಳಲೆ, ಶ್ರೀಪತಿಖಾನ್ ಸರ್ಕಾರಿ ಶಾಲೆಯ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಲಾಯಿತು. ಗ್ರಾಪಂ ಸದಸ್ಯರಾದ ಯು.ಸಿ.ಪ್ರದೀಪ್, ಗೇರುಬೈಲು ನಟರಾಜ್, ಎ.ಬಿ.ಗಣೇಶ್, ಪಿಡಿಒ ಮಂಜುಳಾ, ಸಿಬ್ಬಂದಿ ನಾಗೇಶ್, ನಾಗವೇಣಿ, ನಂದೀಶ್ ಮತ್ತಿತರರು ಹಾಜರಿದ್ದರು.