ಜಿಲ್ಲೆ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಿವಕುಮಾರ್ ಅಮಾನತ್ತು

ಅವಿನಾಶ್ ಜೈನಹಳ್ಳಿ

ಮೈಸೂರು: ತಗಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಲುಷಿತ ನೀರು ಸೇವನೆಯಿಂದ 122 ಜನರಿಗೆ ವಾಂತಿ, ಬೇದಿ ಪ್ರಕರಣ ವರದಿಯಾಗಿರುವ ಸಂಬಂಧ ನಂಜನಗೂಡು ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಿವಕುಮಾರ್‌ರನ್ನು ಅಮಾನತುಗೊಳಿಸಿ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ.ಚೇತನ ಆದೇಶ ಹೊರಡಿಸಿದ್ದಾರೆ.

ಶಿವಕುಮಾರ್ ಅವರು ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ(ನಡತೆ) 2021ರ ನಿಯಮ 3(1)ನ್ನು ಉಲ್ಲಂಘಿಸಿ ತಮ್ಮ ಕರ್ತವ್ಯದಲ್ಲಿ ವಿಫಲರಾಗಿ ನಿರ್ಲಕ್ಷೃತೆ ತೋರಿಸಿದ್ದಾರೆ. ಸಾರ್ವಜನಿಕ ಮಹತ್ವದ ಕಾಮಗಾರಿಗಳ ಅನುಷ್ಟಾನದಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದು ಸ್ಪಷ್ಟವಾಗಿದೆ. ಆ ಮೂಲಕ ತಮ್ಮ ಕರ್ತವ್ಯದಲ್ಲಿ ಪೂರ್ಣ ಪ್ರಮಾಣದ ನಿಷ್ಠೆ ಮತ್ತು ಪ್ರಾಮಾಣಿಕತೆ ತೋರಲು ವಿಫಲರಾಗಿ ಗಂಭೀರ ಸ್ವರೂಪದ ದುರ್ನಡತೆ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇಲಾಖಾ ವಿಚಾರಣೆ ಕೈಗೊಳ್ಳುವುದನ್ನು ಬಾಕಿ ಇಟ್ಟು ಕರ್ನಾಟಕ ನಾಗರಿಕ ಸೇವಾ 1957ರ ನಿಮಯ 10(1) (ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಆದೇಶಿಸಿದ್ದಾರೆ.

ಇದಕ್ಕೂ ಮುನ್ನ ಶಿವಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪತ್ರ ಪರೆದಿದ್ದರು.