ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಹಮ್ಮದ್ ಅನ್ಸಸ್, ಪ್ರೊ.ಎ.ಎಂ.ಶಿವಸ್ವಾಮಿ, ಡಾ.ಎನ್. ವಸಂತರಾಜು, ಡಾ.ಎಂ.ಎಸ್.ನಾಗಣ್ಣ, ಆರ್.ಚಲುವರಾಜು, ಡಾ.ಡಿ.ಹರೀಶ್, ಡಾ.ಎಸ್.ಅಶ್ವಿನಿ, ಪಿ.ಶೇಖರ ಇತರರು ಇದ್ದರು. 
ಜಿಲ್ಲೆ

ಗ್ರಾಮೀಣ ವಿದ್ಯಾರ್ಥಿಗಳು ಕೌಶಲ ಶಿಕ್ಷಣಕ್ಕೆ ಒತ್ತು ನೀಡಲಿ

ಮಾದೇಶ್ ತಿ.ನರಸೀಪುರ

ತಿ.ನರಸೀಪುರ: ಪದವಿ ಶಿಕ್ಷಣ ಪಡೆಯುತ್ತಿರುವ ಗ್ರಾಮೀಣ ಭಾಗದ ಯುವಕ, ಯುವತಿಯರು ಸ್ಪರ್ಧಾತ್ಮಕ ಯುಗದಲ್ಲಿ ಜಾಗತಿಕ ಕಾಲಘಟ್ಟಕ್ಕೆ ತಕ್ಕಂತೆ ತಾಂತ್ರಿಕ ಮತ್ತು ಕೌಶಲ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಚಾಮರಾಜನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ.ಎಂ.ಶಿವಸ್ವಾಮಿ ಸಲಹೆ ನೀಡಿದರು.

ತಾಲೂಕಿನ ತಲಕಾಡು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ಉತ್ತಮ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್‌ನ ಮೈಸೂರು ವಲಯದ ಸಹ ನಿರ್ದೇಶಕ ಮಹಮ್ಮದ್ ಅನ್ಸಸ್ ಮಾತನಾಡಿ, ಹಳ್ಳಿಗಾಡಿನ ಹೆಣ್ಣು ಮಕ್ಕಳ ಪದವಿ ಶಿಕ್ಷಣ ಪ್ರೋತ್ಸಾಹಿಸಲು ತಲಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷವೂ ವಿದ್ಯಾರ್ಥಿ ವೇತನ ನೀಡುವುದಾಗಿ ಪ್ರಕಟಿಸಿದರು. ಆರ್ಥಿಕ ಸಮಸ್ಯೆ ಇದೆ ಎಂದು ಪದವಿ ಶಿಕ್ಷಣವನ್ನು ಮೊಟಕುಗೊಳಿಸಬಾರದು. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸವನ್ನು ಮುಂದುವರಿಸಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಎನ್. ವಸಂತರಾಜು, ಕಾಲೇಜಿನ ವಿವಿಧ ಘಟಕಗಳ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಸಾಂಸ್ಕೃತಿಕ ವೇದಿಕೆ ಮುಖ್ಯಸ್ಥ ಡಾ.ಡಿ.ಹರೀಶ್, ಐಕ್ಯೂಎಸಿ ಘಟಕದ ಮುಖ್ಯಸ್ಥೆ ಡಾ.ಎಸ್.ಅಶ್ವಿನಿ, ಯುವ ರೆಡ್ ಕ್ರಾಸ್ ಘಟಕದ ಮುಖ್ಯಸ್ಥ ಪಿ.ಶೇಖರ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥ ಸಿ.ಎನ್.ನವೀನ್ ರಾವ್, ಇತಿಹಾಸ ವಿಭಾಗದ ಮುಖ್ಯಸ್ಥ ಆರ್.ಚಲುವರಾಜು, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮಹದೇವಮ್ಮ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎಂ.ಎಸ್.ನಾಗಣ್ಣ, ಪ್ರಾಧ್ಯಾಪಕ ಎಸ್.ರವಿಕುಮಾರ್, ಸಹಾಯಕ ಪ್ರಾಧ್ಯಾಪಕರಾದ ಡಾ.ನೀಲಯ್ಯ, ಹರೀಶ್, ಕೆಂಪಣ್ಣ, ಕೃಷ್ಣಕುಮಾರಿ ಹಾಗೂ ಬೋಧಕೇತರ ಸಿಬ್ಬಂದಿ ರಮೇಶ್, ತೇಜೋಮೂರ್ತಿ, ಮಹೇಶ್ ಇತರರು ಇದ್ದರು.