ಜಿಲ್ಲೆ

ಶಾಲಾ ಆಡಳಿತಗ್ರಾಮೀಣ ಶಿಕ್ಷಕರ ಮನವಿ

Dharwada - Basavaraj Idli

ಹುಬ್ಬಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 26 ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಗೆ ವರ್ಗಾಯಿಸುತ್ತಿರುವ ಕ್ರಮವನ್ನು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿರೋಧಿಸಿದೆ.

ಈ ನಿರ್ಧಾರವನ್ನು ಕೈ ಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಸಂಘದ ಮನವಿಗೆ ಸ್ಪಂದಿಸಿದ ಸಭಾಪತಿ ಹೊರಟ್ಟಿ ಅವರು, ಈ ಕೂಡಲೇ ಪತ್ರ ಬರೆದು ಸಂಬಂಧಿಸಿದವರ ಗಮನ ಸೆಳೆಯುವುದಾಗಿ ತಿಳಿಸಿದರು.

ನಿಯೋಗದಲ್ಲಿ ಸಂಘದ ಅಧ್ಯಕ್ಷ ಅಶೋಕ ಸಜ್ಜನ, ಮಹಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ ಮೇಟಿ, ಸಲಹಾ ಸಮಿತಿ ಅಧ್ಯಕ್ಷ ಗೋವಿಂದ ಜುಜಾರೆ, ಉಪಾಧ್ಯಕ್ಷ ಅಶೋಕ ಬಿಸೇರೊಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಿಗೌಡ ಭೂಮನಗೌಡ್ರ, ಜಿಲ್ಲಾ ಉಪಾಧ್ಯಕ್ಷ ಆನಂದ ದುಂದೂರ ಮುಂತಾದವರು ಉಪಸ್ಥಿತರಿದ್ದರು.