ತುಮಕೂರು: ಖಾಸಗಿ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್ ನಡುವೆ ಡಿಕ್ಕಿ ಹೊಡೆದಿರುವ ಪರಿಣಾಮವಾಗಿ ನಾಲ್ಕು ಮಂದಿ ಮೃತಪಟ್ಟಿರುವ ಘಟನೆ ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ.
ಖಾಸಗಿ ಬಸ್ಸಲ್ಲಿ ಒಟ್ಟು 22 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮ್ಯಾಕ್ಸಿಕ್ಯಾಬ್ ಮತ್ತು ಬಸ್ ನಡುವೆ ಡಿಕ್ಕಿಯಾಗಿದೆ. ಮೃತಪಟ್ಟವರಲ್ಲಿ ನಾಲ್ವರೂ ಮ್ಯಾಕ್ಸಿಕ್ಯಾಬ್‌ನಲ್ಲಿ ಇದ್ದರು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದರು. ಉಳಿದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜವಾಗಲಿಲ್ಲ. ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತಪಟ್ಟವರನ್ನು ಕವಿತಾ (38), ದರ್ಶನ್ (22), ಕೃಷ್ಣಮೂರ್ತಿ(25) ಹಾಗೂ ದಿವಾಕರ್ (25) ಎಂದು ಗುರುತಿಸಲಾಗಿದೆ. ಪ್ರತಿದಿನ ಇವರು ಹೂವಿನ ವ್ಯಾಪಾರಕ್ಕೆ ತುಮಕೂರಿಗೆ ಬರುತ್ತಿದ್ದರು. ಹೂವು ಕೊಂಡು ತುರುವೇಕೆರೆಯಲ್ಲಿ ವ್ಯಾಪಾರ ಮಾಡುತ್ತಿದ್ದರು. ದಿನವೂ ಬಸ್‌ನಲ್ಲಿ ಹೋಗುತ್ತಿದ್ದವರು ಇಂದು ಕ್ಯಾಬ್ ಏರಿದ್ದರು, ವಿಧಿಯಾಟವೇ ಬೇರೆಯಾಗಿಹೋಗಿತ್ತು.