ಜಿಲ್ಲೆ

ಉದ್ಯೋಗ ಕೊಡಿಸುವ ನೆಪದಲ್ಲಿ ಅತ್ಯಾಚಾರ ಆರೋಪ: ಸ್ಯಾಂಡಲ್‌ವುಡ್‌ ನಟ ಶೇಷಗಿರಿ ಅರೆಸ್ಟ್‌

suchetana

ಬೆಂಗಳೂರು: ಬ್ಯಾಂಕ್‌ ಒಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಯುವತಿಯೊಬ್ಬಳಿಂದ ಹಣವನ್ನು ಪಡೆದುದು ಮಾತ್ರವಲ್ಲದೇ, ಅತ್ಯಾಚಾರ ಎಸಗಿರುವ ಆರೋಪದಲ್ಲಿ ಸ್ಯಾಂಡಲ್‌ವುಡ್‌ ನಟ ಶೇಷಗಿರಿ ಬಸವರಾಜ್ ಸಿಲುಕಿದ್ದು, ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ಇವರ ವಿರುದ್ಧ ಕಳೆದ ತಿಂಗಳು ಯುವತಿ ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದಳು. ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದು, ರೇಪ್‌ ಮಾಡಿ ಹಣ ಹಿಂತಿರುಗಿಸುವಂತೆ ಕೇಳಿದಾಗ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಯುವತಿ ಹೇಳಿದ್ದಾಳೆ. ಇಷ್ಟಾಗುತ್ತಿದ್ದಂತೆಯೇ ಶೇಷಗಿರಿ ತಲೆಮರೆಸಿಕೊಂಡಿದ್ದರು. ಮೈಸೂರಿನಲ್ಲಿ ಅವರು ಇರುವುದನ್ನು ಪತ್ತೆ ಮಾಡಿದ ಪೊಲೀಸರು ಅಲ್ಲಿಗೆ ಹೋಗಿ ಬಂಧಿಸಿದ್ದಾರೆ.

ಈ ಹಿಂದೆ ಬ್ಯಾಂಕ್ ಉದ್ಯೋಗಿ ಅಗಿದ್ದ ಶೇಷಗಿರಿ ಬಸವರಾಜ್‌, ಸಿನಿಮಾದಲ್ಲಿ ನಟಿಸುವ ಉದ್ದೇಶದಿಂದ ಬ್ಯಾಂಕ್ ಕೆಲಸ ಬಿಟ್ಟಿದ್ದರು. ಕೆಲವೊಂದು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಹಾಗೂ ‍ಪೋಷಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಡಾರ್ಕ್, ಸಸ್ಪೆನ್ಸ್, ಕಿಲಾಡಿಗಳು, ಆಶಿಕಿ-3 ಸಿನಿಮಾಗಳಲ್ಲಿ ನಟಿಸಿದ್ದಾರೆ.