ಬೆಂಗಳೂರು: ಪುನರ್ ಪರಿಷ್ಕರಣೆಯ ಪಠ್ಯ ಪುಸ್ತಕಗಳನ್ನು ವಾಪಸ್ ಪಡೆದು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, "ವಿಶ್ವಮಾನವ ಕುವೆಂಪು ಹೋರಾಟ ಸಮಿತಿ'ಯ ಹಕ್ಕೊತ್ತಾಯ ಪತ್ರದ ಆಶಯಗಳನ್ನು ಬೆಂಬಲಿಸುತ್ತ, ಈ ವಿಷಯವಾಗಿ ಕೂಡಲೇ ಕಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಪಠ್ಯಮಸ್ತಕಗಳ ಮರು ಪರಿಷ್ಠರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಕುವೆಂಪು ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡ ದ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜತೆಗೆ ಡಾ.ಆಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು. ಇನ್ನು ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ.
ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ" ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ. ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತಾ ವಾದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ.
ಪಠ್ಯಮಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ವರಿಷ್ಠರಣೆಯ ಪಠ್ಯ ಪುಕಗಳನ್ನು ವಾಪಸ್ ಪಡೆಯಬೇಕು ಎಂದು ದೇವೇಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಪತ್ರದೊಂದಿಗೆ ಪಠ್ಯ ಪುಸ್ತಕಗಳ ಮರು ವರಿಷ್ಠರಣೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಜೂ. 18 ರಂದು ಬೆಂಗಳೂರಿನಲ್ಲಿ ನಡದ ಪ್ರತಿಭಟನಾ ಸಮಾವೇಶದಲ್ಲಿ ನೀಡಿದ ಮನವಿಯನ್ನೂ ಲಗತ್ತಿಸಿದ್ದಾರೆ.