ಜಿಲ್ಲೆ

ಹಿರಿಯ ಕವಿ ನಾಡೋಜ ಚನ್ನವೀರ ಕಣವಿಗೆ ಕರೊನಾ ಸೋಂಕು: ಆಸ್ಪತ್ರೆಗೆ ದಾಖಲು

suchetana

ಧಾರವಾಡ: ಚೆಂಬೆಳಕಿನ ಕವಿ ಎಂದೇ ಖ್ಯಾತಿ‌ ಪಡೆದಿರುವ, ರಾಜ್ಯ ಕಂಡ ಅಪರೂಪದ ಕವಿಗಳಲ್ಲಿ ಒಬ್ಬರಾಗಿರುವ ನಾಡೋಜ ಚನ್ನವೀರ‌ ಕಣವಿ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ. 93 ವರ್ಷದ ಕಣವಿ ಅವರನ್ನು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹೋಗಿದ್ದರು. ಈ ವೇಳೆ ಕರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್‌ ಬಂದಿದೆ. ಸದ್ಯ ಚನ್ನವೀರ ಕಣವಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಇನ್ನಷ್ಟು ವಿವರ ನಿರೀಕ್ಷಿಸಲಾಗುತ್ತಿದೆ.