ಬೀದರ್: ಕೆಎಸ್ಆರ್‌ಟಿಸಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ನಡೆದಿದೆ.
ಸಾರಿಗೆ ಬಸ್ ಚಾಲಕ ಓಂಕಾರ್ ಶೇರಿಕರ್ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಭಾಲ್ಲಿ ಕೆಎಸ್ಆರ್‌ಟಿಸಿ ಡಿಪೋನಲ್ಲಿ ಡ್ರೈವರ್ ಆಗಿದ್ದರು.
ಎಸ್‌ಟಿ ಜಾತಿ ಪ್ರಮಾಣ ಪತ್ರದ ಸಿಂಧುತ್ವ ನೀಡದೇ ಅಧಿಕಾರಿಗಳಿಂದ ವಿಳಂಬ ಮಾಡಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 8 ಲಕ್ಷ ರೂ.ವರೆಗೂ ಖರ್ಚು ಮಾಡಿದ್ದರೂ ಸಿಂಧುತ್ವ ನೀಡದೇ ಅಧಿಕಾರಿಗಳು ಸತಾಯಿಸಿದ್ದರಿಂದ ಓಂಕಾರ್ ಅವರು ಬೇಸತ್ತು ಹೋಗಿದ್ದರು.
ಕಂದಾಯ ಇಲಾಖೆ ಅಧಿಕಾರಿಗಳ ಬೇಜವಬ್ದಾರಿತನ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳುತ್ತಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪತ್ನಿ, ನಾಲ್ಕು ಜನ ಹೆಣ್ಣು ಮಕ್ಕಳನ್ನು ಇವರು ಅಗಲಿದ್ದಾರೆ. (ದಿಗ್ವಿಜಯ ನ್ಯೂಸ್)