ಜಿಲ್ಲೆ

ಶಾಸಕ ದೇವೇಗೌಡರ ಮೂರು ವರ್ಷದ ಮೊಮ್ಮಗಳ ನಿಧನ: ಆಸ್ಪತ್ರೆ ಸೇರಿಸಿದರೂ ಫಲಿಸದ ಚಿಕಿತ್ಸೆ

suchetana

ಮೈಸೂರು: ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ‌.ಹರೀಶ್ ಗೌಡ ಹಾಗೂ ಶಾಸಕ ಜಿ.ಟಿ‌.ದೇವೇಗೌಡರ ಮೊಮ್ಮಗಳು ಗೌರಿ ಶನಿವಾರ ರಾತ್ರಿ ನಿಧನಳಾಗಿದ್ದಾಳೆ. ಈಕೆಗೆ ಮೂರು ವರ್ಷ ವಯಸ್ಸಾಗಿತ್ತು.

ಕೆಲ ದಿನಗಳಿಂದ ಈಕೆ ಅನಾರೋಗ್ಯದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಈಕೆಯನ್ನು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.

ಮೈಸೂರು ತಾಲೂಕಿನ ಗುಂಗಾಲ್ ಛತ್ರದ ತೋಟದ ಮನೆಯಲ್ಲಿ ಇಂದು (ಭಾನುವಾರ) ಮಧ್ಯಾಹ್ನ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬಾಲಕಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್‌ ಮತ್ತು ಕುಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.