ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮುಂಜಾನೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ನಾಯಂಡಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಿ ಹಾನಿಯಾಗಿಲ್ಲ ಎನ್ನಲಾಗಿದೆ.
ಬೆಂಗಳೂರಿನಿಂದ ರಾಮನಗರಕ್ಕೆ ಗಂಡ-ಹೆಂಡತಿ ಮತ್ತು ಗಂಡನ ತಾಯಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಕಾರಿನ ಡೋರ್ ಸಂಪೂರ್ಣವಾಗಿ ಲಾಕ್ ಆಗಿತ್ತು. ಆದ್ದರಿಂದ ಪ್ರಯಾಣಿಕರು ಗಾಜು ಒಡೆದು ಕಾರಿನಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂದಿರುವ ಟ್ರಾಫಿಕ್ ಪೊಲೀಸರು ಟೌವ್ ವಾಹನದ ಸಹಾಯದಿಂದ ಕಾರನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದಾರೆ.