ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅವರಿಗೆ ತೀವ್ರವಾದ ಜ್ವರ ಕಾಣಿಸಿಕೊಂಡಿತ್ತು. ಆರೋಗ್ಯದಲ್ಲಿ ಏರುಪೇರಾಯಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಪ್ರಾಥಮಿಕ ಆರೋಗ್ಯ ತಪಾಸಣೆ ನಂತರ ಆ್ಯಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸದ್ಯ ಯಾವುದೇ ತೊಂದರೆ ಇಲ್ಲ, ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡುವುದಾಗಿ ವೈದ್ಯರು ಹೇಳಿದುದ್ದಾಗಿ ಜನಾರ್ದನ ರೆಡ್ಡಿ ಕುಟುಂಬದವರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಇವರಿಗೆ ಕರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.