ಜಿಲ್ಲೆ

ಕಲಬುರಗಿಯಲ್ಲಿ ಗುಂಡಿನ ಸದ್ದು: ಕೊಲೆ ಮಾಡಿ ಪರಾರಿಯಾಗುತ್ತಿದ್ದನ ಗುಂಡುಹಾರಿಸಿ ಬಂಧನ

ಕಲಬುರಗಿ: ವಲಸೆ ಕಾರ್ಮಿಕನನ್ನು ಕೊಲೆ ಮಾಡಿ, ನಂತರ ಪರಾರಿಯಾಗಲು ಯತ್ನಿಸಿದ್ದ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿರುವ ಪೊಲೀಸರು ಆತನನ್ನು ಬಂಧಿಸಿರುವ ಘಟನೆ ಇಂದು ನಸುಕಿನಲ್ಲಿ ನಡೆದಿದೆ.

ಈ ಘಟನೆ ನಡೆದಿರುವುದು ಜಿಲ್ಲೆಯ ಹೊರವಲಯದ ಸುಲ್ತಾನಪುರ ಬಳಿ. ಮೆಹಬೂಬ್ ನಗರ ನಿವಾಸಿ ಮುಬಿನ್ ಅಲಿಯಾಸ್ ಅಬ್ದುಲ್ ರೆಹಮಾನ್ (25) ಕೊಲೆ ಆರೋಪಿ.

ವಲಸೆ ಕಾರ್ಮಿಕನ ಮೊಬೈಲ್ ಕಿತ್ತುಕೊಳ್ಳಲು ಹೋಗಿ ಆರೋಪಿ ಆತನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಘಟನೆ ನಂತರ ನಂತರ ಈತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಆತನನ್ನು ಬಂಧಿಸಿದ್ದ ಗ್ರಾಮೀಣ ಠಾಣೆ ಪೊಲೀಸರು ಬೆಳಗ್ಗೆ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಕರೆದೊಯ್ದಿದ್ದರು.ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ‌ಹೋಗಲು ಯತ್ನಿಸಿದ್ದ.

ಈ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್​ ಸೋಮಲಿಂಗ ಕಿರದಳ್ಳಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್​ಸ್ಟೆಬಲ್​ಗಳಿಗೆ ಗಾಯಗಳಾಗಿವೆ. ಹೀಗಾಗಿ ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಆರೋಪಿ ಮುಬಿನ್​ನನ್ನು ಜಿಲ್ಲಾಸ್ಪತ್ರೆಗಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.