ಜಿಲ್ಲೆ

ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಲೋಕಾಯುಕ್ತ ಶಾಕ್​! ಈ ಎಲ್ಲಾ ಆಫೀಸ್​ಗಳಿಗೆ ಭೇಟಿ, ಪರಿಶೀಲನೆ

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ 10 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ‌ ಲೋಕಾಯುಕ್ತ ನ್ಯಾ.ಶಶಿಕಾಂತ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ‌.

ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇಸಿ ಸರ್ಟಿಫಿಕೇಟ್ ವಿಳಂಬ, ಅಕ್ರಮವಾಗಿ ಜಮೀನು ಪರಭಾರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ, ಖಾತಾ ಮಾಡಿಕೊಡಲು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಸೇರಿದಂತೆ ನಾನಾ ರೀತಿಯ ದೂರುಗಳ ಸರಮಾಲೆ ಲೋಕಾಯುಕ್ತಕ್ಕೆ ಬಂದಿತ್ತು‌.‌ ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತರು ಇಂದು ಹತ್ತು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ‌‌‌. ಪರಿಶೀಲನೆ ಬಳಿಕ ಆಂತರಿಕ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ..

ಎಲ್ಲೆಲ್ಲಿ ದಾಳಿ ಗೊತ್ತಾ ?

ಯಶವಂತಪುರ, ಕೆ.ಆರ್.ಪುರ,‌ ಜಯನಗರ ನಾಗರಭಾವಿ, ಬೊಮ್ಮನಹಳ್ಳಿ, ಗಂಗಾನಗರ, ಬ್ಯಾಟರಾಯನಪುರ, ಮಾದನಾಯಕನಹಳ್ಳಿ, ಆರ್.ಆರ್.ನಗರ, ಅತ್ತಿಬೆಲೆ ಹಾಗೂ ಜಿಗಣಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ವಿ.ಅಶೋಕ್ ನೇತೃತ್ವದಲ್ಲಿ 10 ಡಿಎಸ್ಪಿ 20 ಮಂದಿ ಇನ್ ಸ್ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.