ಜಿಲ್ಲೆ

ಪೇಂಟ್​ ಡಬ್ಬ ತುಂಬಿದ್ದ ಲಾರಿಗೆ ಬೆಂಕಿ- ಹಿರಿಯೂರಿನಲ್ಲಿ ತಡರಾತ್ರಿ ಘಟನೆ

suchetana

ಚಿತ್ರದುರ್ಗ: ಪೇಂಟ್​ ಡಬ್ಬಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾದ ಪರಿಣಾಮವಾಗಿ ಲಾರಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕು ಗೊರಲಡುಕು ಬಳಿ ನಡೆದಿದೆ.

ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಬಂದ ಪೇಂಟ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿದೆ. ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ - ಗೋರಲಡುಕು ಸಮೀಪದ ಓಂ ಶಕ್ತಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬಳಿ ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.

ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಲಾರಿ ಹೊತ್ತಿ ಉರಿಯುತ್ತಿದ್ದಂತೆ ಲಾರಿ, ಚಾಲಕ ಜಿಗಿದ ಹಿನ್ನೆಲೆಯಲ್ಲಿ ಅವರು ಪಾರಾಗಿದ್ದಾರೆ.

ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಪೇಂಟ್ ತುಂಬಿಕೊಂಡಿದ್ದ ಲಾರಿ ಹೋಗುತ್ತಿತ್ತು. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬೆಂಕಿ ಹೊತ್ತುಕೊಂಡಿದೆ. ಪೇಂಟ್ ಬಾಕ್ಸ್ ಗಳು ರಸ್ತೆಯಲ್ಲಿ ಬಿದ್ದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಉರಿಯುವ ಬೆಂಕಿಯನ್ನು ನಂದಿಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.