ಜಿಲ್ಲೆ

ಕಂಠೀರವ ಸ್ಟುಡಿಯೋದಲ್ಲಿ ಅಪ್ಪನ ಪಕ್ಕವೇ ಸರ್ಕಾರಿ ಗೌರವಗಳೊಂದಿಗೆ ಅಪ್ಪು ಸಮಾಧಿ: ಸರ್ಕಾರದ ಅನುಮತಿ

suchetana

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆ ನಾಳೆ (ಶನಿವಾರ) ಕಂಠೀರವ ಸ್ಟುಡಿಯೋದಲ್ಲಿ ನೆರವೇರಲಿದೆ. ಡಾ.ರಾಜ್‌ಕುಮಾರ್‌ ಅವರ ಸಮಾಧಿಯ ಪಕ್ಕವೇ ಸ್ಟುಡಿಯೋದಲ್ಲಿ ಮಗ ಪುನೀತ್‌ ಸಮಾಧಿ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿರುವ ಸರ್ಕಾರ, ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್‌ ಪ್ರತಿಷ್ಠಾನದ ಡಾ.ರಾಜ್‌ಕುಮಾರ್‌ ಅವರ ಸಮಾಧಿಯ ಪಕ್ಕದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ಸಂಸ್ಕಾರ ನೆರವೇರಿಸಲು ಅನುಮತಿ ನೀಡಲಾಗಿದೆ.

ಇದರ ಜತೆಗೆ ಪುನೀತ್‌ ಅವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಹೇಳಿದೆ. ಪೊಲೀಸ್‌ ಗೌರವಗಳೊಂದಿಗೆ ಸಕಲ ಕೋವಿಡ್‌ ನಿಯಮ ಪಾಲಿಸಿ, ಅತ್ಯಂತ ಕಡಿಮೆ ಸಿಬ್ಬಂದಿಯ ನಿಯೋಜಿಸಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಿರುವುದಾಗಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಈ ನಡುವೆ, ಪುನೀತ್‌ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ಅಭಿಮಾನಿಗಳು, ಗಣ್ಯರು ತಂಡೋಪತಂಡವಾಗಿ ಬರುತ್ತಿದ್ದಾರೆ. ಸಂಜೆ 6.30ರ ನಂತರ ಪಾರ್ಥಿವ ಶರೀರವನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇಡುವ ವ್ಯವಸ್ಥೆ ಮಾಡಲಾಗಿತ್ತು.